HomeNEWSತಮಿಳುನಾಡಿಗೆ 15 ದಿನ ನಿತ್ಯ 9 ಸಾವಿರ ಕ್ಯೂಸೆಕ್ ಕಾವೇರಿ ನೀರು: CWMA ಶಿಫಾರಸು ಎತ್ತಿಹಿಡಿದ...

ತಮಿಳುನಾಡಿಗೆ 15 ದಿನ ನಿತ್ಯ 9 ಸಾವಿರ ಕ್ಯೂಸೆಕ್ ಕಾವೇರಿ ನೀರು: CWMA ಶಿಫಾರಸು ಎತ್ತಿಹಿಡಿದ ಪ್ರಾಧಿಕಾರ

-

spot_img

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿದೆ.
ಮುಂದಿನ 15 ದಿನಗಳ ಕಾಲ ಪ್ರತಿದಿನ 9 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯಲ್ಲಿರುವ CWMA ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಭಾಗವಹಿಸಿದ್ದರು.
ಕಾವೇರಿ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ರಾಜ್ಯದ ಅಗತ್ಯತೆ ಹಾಗೂ ತಮಿಳುನಾಡಿನ ಬೇಡಿಕೆ ಸೇರಿದಂತೆ ಹಲವು ಅಂಶಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ. ಅಂತಿಮವಾಗಿ CWRC ಶಿಫಾರಸನ್ನೇ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಧಾರಕ್ಕೆ ರಾಜ್ಯದಲ್ಲಿ ವಿರೋಧವೂ ವ್ಯಕ್ತವಾಗಿದೆ. ಜೆಡಿಎಸ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರೈತರ ಹಿತಾಸಕ್ತಿ ಕಾಪಾಡುವಲ್ಲಿ ಸರ್ಕಾರಕ್ಕೆ ಕಾಳಜಿಯಿಲ್ಲ ಎಂದು ಆರೋಪಿಸಿದೆ. ಮಳೆ ಪ್ರಮಾಣ, ಜಲಾಶಯಗಳ ಒಳಹರಿವು ಹಾಗೂ ಕರ್ನಾಟಕದ ಕುಡಿಯುವ ಮತ್ತು ಕೃಷಿ ನೀರಿನ ಅಗತ್ಯತೆಗಳ ನಡುವೆ ಈ ಆದೇಶವನ್ನು ಹೇಗೆ ಜಾರಿಗೊಳಿಸಲಾಗುತ್ತದೆ ಎಂಬುದು ಇದೀಗ ಪ್ರಮುಖ ಪ್ರಶ್ನೆಯಾಗಿದೆ.

LEAVE A REPLY

Please enter your comment!
Please enter your name here

- Advertisment -spot_img