ಮಡಿಕೇರಿಯ ಮರಗೋಡುವಿನಲ್ಲಿ ಹುಲಿ ದಾಳಿ: ಎರಡು ಕರುಗಳು ಬ*ಲಿ

ಹೊಸದಿಗಂತ ವರದಿ ಮಡಿಕೇರಿ:

ದಕ್ಷಿಣ ಕೊಡಗಿನ ಹಲವೆಡೆ ನಿರಂತರವಾಗಿ ನಡೆಯುತ್ತಿದ್ದ ಹುಲಿ ಹಾವಳಿ ಇದೀಗ ಉತ್ತರ ಕೊಡಗಿಗೂ ವ್ಯಾಪಿಸಿದ್ದು, ಮಡಿಕೇರಿ ತಾಲೂಕಿನಲ್ಲಿ ಹಸುವಿನ ಕರುಗಳ ಮೇಲೆ ಹುಲಿ ದಾಳಿ ನಡೆಸಿದೆ.

ಮರಗೋಡು ಗ್ರಾಮದ ಪರಿಚನ ಮನೋಜ್ ಅವರಿಗೆ ಸೇರಿದ ಹಸುವಿ ಕರುಗಳ‌ ಮೇಲೆ ಹುಲಿ ದಾಳಿ ನಡೆಸಿದ್ದು, ಒಂದು ಕರು ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಮತ್ತೊಂದು ಕರುವನ್ನು ಹುಲಿ ಎಳೆದೊಯ್ದಿದೆ.
ಹುಲಿ ಕಾಣಿಸಿಕೊಂಡಿರುವ ಘಟನೆ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇದರಿಂದ ಜಾನುವಾರು ಸಾಕಾಣಿಕೆದಾರರು ಹಾಗೂ ಸ್ಥಳೀಯ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.

ಮರಗೋಡು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಸಂಚಾರದ ಸುದ್ದಿ ಹರಡುತ್ತಿದ್ದಂತೆ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಜಾನುವಾರುಗಳನ್ನು ಮೇಯಿಸಲು ಹಾಗೂ ತೋಟದ ಕೆಲಸಗಳಿಗೆ ತೆರಳುವವರು ಎಚ್ಚರಿಕೆ ವಹಿಸುವಂತಾಗಿದೆ.

ಅರಣ್ಯ ಇಲಾಖೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಹುಲಿಯ ಚಲನವಲನ ಪತ್ತೆಹಚ್ಚಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

More like this

25°C ಕೆಳಗಿನ ತಾಪಮಾನ ಇರುವ ಪ್ರವಾಸಿ ತಾಣಗಳು: ಬೇಸಿಗೆಯಿಂದ ಪಾರಾಗಲು ಭಾರತೀಯರಿಗೆ...

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಉಷ್ಣಾಂಶ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆ, ತಂಪಾದ ವಾತಾವರಣದ ಪ್ರವಾಸಿ ತಾಣಗಳತ್ತ ಜನರು ಮುಖ ಮಾಡುತ್ತಿದ್ದಾರೆ. ಇತ್ತೀಚಿನ ವರದಿಗಳ...

ಗುಲ್ಮರ್ಗ್ ಅಥವಾ ಪಹಲ್ಗಾಮ್? ಕಾಶ್ಮೀರಕ್ಕೆ ಹೋಗುವ ಮುನ್ನ ಇದನ್ನು ಓದಿ

ಕಾಶ್ಮೀರಕ್ಕೆ ಹೋಗಬೇಕು ಎನ್ನುವುದು ಅನೇಕ ಜನರ ಕನಸು... ಹಿಮ ಮುಚ್ಚಿದ ಬೆಟ್ಟಗಳು, ಹಸಿರು ಕಣಿವೆಗಳು, ತಣ್ಣನೆಯ ಗಾಳಿ, ಕಣ್ಣು ತುಂಬುವ ದೃಶ್ಯಗಳು... ಇವೆಲ್ಲ ಒಂದೇ...

ಕೊಡಗು: ಪ್ರಕೃತಿ ರಮಣೀಯ ಮಂಜಿನ ಬೆಟ್ಟಗಳ ಹಿಂದೆ ಅಡಗಿದೆ ಒಂದು...

ಕೆಲವು ಸ್ಥಳಗಳು ಕೇವಲ ಪ್ರವಾಸಿ ತಾಣಗಳಾಗಿರುವುದಿಲ್ಲ… ಅವು ಕಥೆಗಳಾಗಿ ನಿಮ್ಮೊಳಗೆ ಉಳಿಯುತ್ತವೆ. ಅಂತಹ ಒಂದು ಸ್ಥಳವೇ ಕೊಡಗು! ನಾನು ಮೊದಲ ಬಾರಿ ಕೊಡಗಿನ ಮಂಜಿನ...