HomeNEWSಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಮರಗಳ ಕಡಿತ ಇಲ್ಲ: ಸಂಸದ ಯದುವೀರ್ ಒಡೆಯರ್ ಭರವಸೆ

ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಮರಗಳ ಕಡಿತ ಇಲ್ಲ: ಸಂಸದ ಯದುವೀರ್ ಒಡೆಯರ್ ಭರವಸೆ

-

spot_img

ಮೈಸೂರು: ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ Yaduveer Krishnadatta Chamaraja Wadiyar ಭರವಸೆ ನೀಡಿದ್ದಾರೆ.

MysuruBengaluru ಹೊರವರ್ತುಲ ರಸ್ತೆ ಬಳಿ ನಿರ್ಮಾಣವಾಗಲಿರುವ ಮೇಲ್ಸೇತುವೆ ಕಾಮಗಾರಿಗೆ ಮುನ್ನ ಸ್ಥಳ ಪರಿಶೀಲನೆ ನಡೆಸಿದ ಅವರು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್ ಒಡೆಯರ್, ನಗರದ ರಸ್ತೆ ಸಂಚಾರದ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಮೈಸೂರು ಜಿಲ್ಲೆಯ ವಿವಿಧೆಡೆ ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಕಾಮಗಾರಿ ಆರಂಭಕ್ಕೂ ಮುನ್ನ ಗಿಡ-ಮರಗಳ ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದರು. “ಈ ಯೋಜನೆಯ ವ್ಯಾಪ್ತಿಯಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ 150ಕ್ಕೂ ಹೆಚ್ಚು ಮರಗಳಿವೆ. ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯುವುದಿಲ್ಲ. ಶೇಕಡಾ 90 ರಷ್ಟು ಮರಗಳನ್ನು ಸ್ಥಳದಲ್ಲೇ ಉಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಪರಿಸರವಾದಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ ಅವರು, ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯನ್ನು ಸಮತೋಲನದಲ್ಲಿ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದರು.

LEAVE A REPLY

Please enter your comment!
Please enter your name here

- Advertisment -spot_img