Latest Posts

ಜು.1ರಿಂದ VB-G-RAM-G ಜಾರಿ: ಗ್ರಾಮೀಣರಿಗೆ ವರ್ಷಕ್ಕೆ 125 ದಿನ ಕೂಲಿ ಉದ್ಯೋಗ ಖಾತರಿ

ನವದೆಹಲಿ: ಕೇಂದ್ರ ಸರ್ಕಾರ ‘ವಿಕಸಿತ ಭಾರತ-ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ’ (VB-G-RAM-G) ಕಾಯ್ದೆ 2025 ಜಾರಿಗೆ ಅಧಿಸೂಚನೆ ಹೊರಡಿಸಿದ್ದು, ಈ ಯೋಜನೆ ದೇಶಾದ್ಯಂತ ಜುಲೈ 1ರಿಂದ ಅನುಷ್ಠಾನಗೊಳ್ಳಲಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ.

ಈ ಕುರಿತು ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಪ್ರತಿ ಹಣಕಾಸು ವರ್ಷದಲ್ಲಿ ಗ್ರಾಮೀಣ ಕುಟುಂಬಗಳಿಗೆ 125 ದಿನಗಳ ಕೂಲಿ ಉದ್ಯೋಗವನ್ನು ಖಾತರಿಪಡಿಸುವ ಉದ್ದೇಶದಿಂದ ಈ ಕಾಯ್ದೆ ಜಾರಿಗೆ ತರಲಾಗಿದೆ. ಗ್ರಾಮೀಣ ಭಾರತವನ್ನು ಆರ್ಥಿಕವಾಗಿ ಮತ್ತಷ್ಟು ಸಬಲೀಕರಣಗೊಳಿಸುವುದು ಯೋಜನೆಯ ಮುಖ್ಯ ಗುರಿಯಾಗಿದೆ.

ಯೋಜನೆಯ ಅನುಷ್ಠಾನಕ್ಕಾಗಿ ಪ್ರಸ್ತುತ ಹಣಕಾಸು ವರ್ಷದಲ್ಲಿ 95 ಸಾವಿರ 692 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಲಾಗಿದೆ. ದೇಶದ ವಿವಿಧ ಗ್ರಾಮೀಣ ಭಾಗಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸುವತ್ತ ಸರ್ಕಾರ ವಿಶೇಷ ಗಮನ ಹರಿಸಿದೆ.

ಮಹಿಳಾ ಕಾರ್ಮಿಕರ ಹೆಚ್ಚಿನ ಭಾಗವಹಿಸುವಿಕೆಗೆ ಉತ್ತೇಜನ ನೀಡಲು ಈ ಯೋಜನೆಯಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಲಸದ ಸ್ಥಳಗಳಲ್ಲಿ ಮಕ್ಕಳ ಆರೈಕೆ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವ ಮೂಲಕ ಮಹಿಳೆಯರಿಗೆ ಅನುಕೂಲಕರ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.

ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಐದು ಅಥವಾ ಹೆಚ್ಚಿನ ಮಕ್ಕಳು ಇದ್ದಲ್ಲಿ, ಮಕ್ಕಳ ಆರೈಕೆಗಾಗಿ ಮಹಿಳಾ ಕೆಲಸಗಾರರನ್ನು ನೇಮಿಸಲಾಗುತ್ತದೆ. ಇದರಿಂದ ಮಹಿಳೆಯರು ಯಾವುದೇ ಅಡೆತಡೆಯಿಲ್ಲದೆ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.

ಕೆಲಸದ ಸ್ಥಳಗಳನ್ನು ಮಹಿಳಾ ಸ್ನೇಹಿಯಾಗಿ ರೂಪಿಸುವುದು ಹಾಗೂ ಗ್ರಾಮೀಣ ಮಹಿಳೆಯರ ಆರ್ಥಿಕ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

Latest Posts

spot_imgspot_img