Latest Posts

ವಿಜಯಪುರದಲ್ಲಿ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿ: ಮನೆ ಬಿಟ್ಟು ಹೊರಗಡೆಯಾದರೆ ಪೊಲೀಸರೇ ನೋಡಿಕೊಳ್ಳುತ್ತಾರೆ ಸುರಕ್ಷತೆ

ವಿಜಯಪುರ: ಮನೆಗೆ ಬೀಗ ಹಾಕಿ ಪ್ರವಾಸ ಅಥವಾ ಇತರ ಕೆಲಸಗಳಿಗೆ ಹೊರಗಡೆಯಾಗುವ ಸಾರ್ವಜನಿಕರ ಸುರಕ್ಷತೆಗಾಗಿ ವಿಜಯಪುರ ಜಿಲ್ಲೆಯಲ್ಲಿ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ (LHBS) ಎಂಬ ನೂತನ ಸುರಕ್ಷತಾ ಉಪಕ್ರಮ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬ ಸಮೇತರಾಗಿ ಹೊರಗಡೆಯಾಗುವ ಸಂದರ್ಭಗಳಲ್ಲಿ ಮನೆಗಳಲ್ಲಿ ಕಳ್ಳತನದ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಆರಂಭಿಸಲಾಗಿದೆ ಎಂದರು.

ಈ ಯೋಜನೆಯಡಿ ಸಾರ್ವಜನಿಕರು ನಿಗದಿಪಡಿಸಿದ ಮೊಬೈಲ್ ಸಂಖ್ಯೆಗೆ ತಮ್ಮ ಮನೆಯ ಸೆಲ್ಫಿ ಹಾಗೂ ಲೊಕೇಶನ್ ಕಳುಹಿಸಬೇಕು. ಬಳಿಕ ಪೊಲೀಸ್ ಬೀಟ್ ತಂಡವು ಆ ಮನೆಯ ಮೇಲೆ ನಿಗಾ ಇರಿಸಿ ಸುರಕ್ಷತೆ ಕಾಪಾಡಲಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರಲ್ಲಿ ಭದ್ರತೆಯ ಬಗ್ಗೆ ವಿಶ್ವಾಸ ಮೂಡಿಸುವ ಉದ್ದೇಶದಿಂದ ಈ ಉಪಕ್ರಮವನ್ನು ಜಿಲ್ಲೆಯಾದ್ಯಂತ ಜಾರಿಗೆ ತರಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ತಂತ್ರಜ್ಞಾನ ಬಳಸಿ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಇದು ಪರಿಣಾಮಕಾರಿ ಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಈ ಹೊಸ ವ್ಯವಸ್ಥೆ ಇಂದಿನಿಂದಲೇ ಜಾರಿಗೆ ಬಂದಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Latest Posts

spot_imgspot_img