HomeNEWSದೇಶದಲ್ಲಿ ಬಿಸಿಗಾಳಿ, ಪ್ರವಾಹ ಪರಿಸ್ಥಿತಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ...

ದೇಶದಲ್ಲಿ ಬಿಸಿಗಾಳಿ, ಪ್ರವಾಹ ಪರಿಸ್ಥಿತಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

-

spot_img

ನವದೆಹಲಿ: ದೇಶದಲ್ಲಿ ಬಿಸಿಗಾಳಿ ಹಾಗೂ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಸಭೆಯಲ್ಲಿ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಬಿಸಿಗಾಳಿ ಮತ್ತು ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸುಧಾರಿತ ತಂತ್ರಜ್ಞಾನ ಹಾಗೂ ನೈಜ ಸಮಯದ ದತ್ತಾಂಶ ಸಂಗ್ರಹಣೆಯ ಮೂಲಕ ಪ್ರವಾಹ ಮುನ್ಸೂಚನೆ ಮತ್ತು ಮುನ್ನೆಚ್ಚರಿಕಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬಿಸಿಗಾಳಿ ಮತ್ತು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಹಾಗೂ ಜಿಲ್ಲಾಮಟ್ಟದಲ್ಲಿ ಅಗತ್ಯ ಸನ್ನದ್ಧತೆ ಮಾಡಿಕೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. ಜೀವಹಾನಿ ಮತ್ತು ಆಸ್ತಿ-ಪಾಸ್ತಿ ನಷ್ಟ ತಡೆಗಟ್ಟಲು ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಅಮಿತ್ ಶಾ ಹೇಳಿದ್ದಾರೆ. ಇದೇ ವೇಳೆ ಪರಿಹಾರ ಸಾಮಗ್ರಿಗಳು, ವೈದ್ಯಕೀಯ ಉಪಕರಣಗಳು ಹಾಗೂ ಅಗತ್ಯ ಔಷಧಿಗಳನ್ನು ಮುಂಚಿತವಾಗಿ ದಾಸ್ತಾನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಬರ, ಬಿಸಿಗಾಳಿ ಹಾಗೂ ಪ್ರವಾಹದಂತಹ ಪ್ರಕೃತಿ ವಿಕೋಪಗಳನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯ ಹೆಚ್ಚಿಸುವತ್ತವೂ ಸಭೆಯಲ್ಲಿ ಒತ್ತು ನೀಡಲಾಯಿತು.

LEAVE A REPLY

Please enter your comment!
Please enter your name here

- Advertisment -spot_img