HomeNEWSಎಬೋಲಾ ಭೀತಿ ಹೆಚ್ಚಳ: ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ಆಫ್ರಿಕಾ ದೇಶಗಳಿಗೆ ಪ್ರಯಾಣ ಬೇಡ...

ಎಬೋಲಾ ಭೀತಿ ಹೆಚ್ಚಳ: ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ಆಫ್ರಿಕಾ ದೇಶಗಳಿಗೆ ಪ್ರಯಾಣ ಬೇಡ ಎಂದ ಕೇಂದ್ರ

-

spot_img

ನವದೆಹಲಿ: ಆಫ್ರಿಕಾ ಖಂಡದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ನಾಗರಿಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಗೆ ಅನಗತ್ಯ ಪ್ರಯಾಣ ಕೈಗೊಳ್ಳಬಾರದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಮತ್ತು ಉಗಾಂಡಾದಲ್ಲಿ ಎಬೋಲಾ ವೈರಸ್‌ನ ಅಪರೂಪದ ಹಾಗೂ ಅಪಾಯಕಾರಿ “ಬುಂಡಿಬುಗ್ಯೊ” ತಳಿ ವ್ಯಾಪಕವಾಗಿ ಹರಡುತ್ತಿರುವುದರಿಂದ ಪರಿಸ್ಥಿತಿ ಗಂಭೀರವಾಗಿದೆ. ಈಗಾಗಲೇ ಅನೇಕರು ಸೋಂಕಿಗೆ ಒಳಗಾಗಿದ್ದು, ಹಲವು ಸಾವುಗಳು ವರದಿಯಾಗಿವೆ. ಈ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ.

ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

ಸೋಂಕು ಪಕ್ಕದ ದಕ್ಷಿಣ ಸುಡಾನ್ ದೇಶಕ್ಕೂ ಹರಡುವ ಆತಂಕ ಇರುವುದರಿಂದ ಈ ಮೂರೂ ರಾಷ್ಟ್ರಗಳನ್ನು ಹೆಚ್ಚಿನ ಅಪಾಯದ ವಲಯವೆಂದು ಪರಿಗಣಿಸಲಾಗಿದೆ. ಈ ಹಿನ್ನೆಲೆ ಭಾರತ ಸರ್ಕಾರ ಕಠಿಣ ಮುಂಜಾಗ್ರತಾ ಕ್ರಮಗಳನ್ನು ಜಾರಿಗೆ ತಂದಿದೆ. ಸೋಂಕಿತ ದೇಶಗಳಿಂದ ಭಾರತಕ್ಕೆ ಆಗಮಿಸುವ ಅಥವಾ ಟ್ರಾನ್ಸಿಟ್ ಮೂಲಕ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ದೆಹಲಿ, ಕೊಚ್ಚಿ, ಹೈದರಾಬಾದ್ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್ ತೀವ್ರಗೊಳಿಸಲಾಗಿದೆ. ಪ್ರಯಾಣಿಕರು ವಿಮಾನದಲ್ಲಿಯೇ ಸ್ವಯಂ ಘೋಷಣಾ ಪತ್ರ ಭರ್ತಿ ಮಾಡಬೇಕಾಗುತ್ತದೆ. ಅಲ್ಲದೆ, ಆಫ್ರಿಕಾ ದೇಶಗಳಲ್ಲಿ ಇರುವ ಭಾರತೀಯರು ಸ್ಥಳೀಯ ಆರೋಗ್ಯ ಇಲಾಖೆಗಳ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ದೇಶದ ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

- Advertisment -
Google search engine