HomeINDIA2026ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ: 15 ನರ್ಸಿಂಗ್ ವೃತ್ತಿಪರರಿಗೆ ಗೌರವ

2026ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ: 15 ನರ್ಸಿಂಗ್ ವೃತ್ತಿಪರರಿಗೆ ಗೌರವ

-

spot_img

ಅಂತರರಾಷ್ಟ್ರೀಯ ದಾದಿಯರ ದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು 15 ನರ್ಸಿಂಗ್ ವೃತ್ತಿಪರರಿಗೆ ಪ್ರದಾನ ಮಾಡಿದರು.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ, ಆರೋಗ್ಯ ಖಾತೆ ರಾಜ್ಯ ಸಚಿವ ಪ್ರತಾಪರಾವ್ ಜಾಧವ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನರ್ಸಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ದಾದಿಯರು, ಶುಶ್ರೂಷಕಿಯರು, ಸಹಾಯಕ ಶುಶ್ರೂಷಕಿಯರು ಹಾಗೂ ಮಹಿಳಾ ಆರೋಗ್ಯ ವೀಕ್ಷಕರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸಿಂಗ್ ವೃತ್ತಿಪರರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಯು ಮೆರಿಟ್ ಪ್ರಮಾಣಪತ್ರ, ಒಂದು ಲಕ್ಷ ರೂಪಾಯಿ ನಗದು ಬಹುಮಾನ, ಪದಕ ಒಳಗೊಂಡಿದೆ.

ಈ ವೇಳೆ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ನರ್ಸಿಂಗ್ ಸಿಬ್ಬಂದಿ ದೇಶದ ಆರೋಗ್ಯ ವ್ಯವಸ್ಥೆಯ ಪ್ರಮುಖ ಆಧಾರಸ್ತಂಭವಾಗಿದ್ದಾರೆ ಎಂದು ಹೇಳಿದರು. ಅತ್ಯಂತ ಸವಾಲಿನ ಪರಿಸ್ಥಿತಿಗಳಲ್ಲಿಯೂ ರೋಗಿಗಳ ಆರೈಕೆಗೆ ನರ್ಸಿಂಗ್ ವೃತ್ತಿಪರರು ತೋರಿಸುವ ಸಮರ್ಪಣೆ ಶ್ಲಾಘನೀಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ನರ್ಸಿಂಗ್ ಸಿಬ್ಬಂದಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ ಎಂದು ರಾಷ್ಟ್ರಪತಿ ಹೇಳಿದರು. ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು 1973ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಥಾಪಿಸಿತ್ತು. ಸಮಾಜಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿದ ನರ್ಸಿಂಗ್ ವೃತ್ತಿಪರರನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -spot_img