Latest Posts

ಕೇಂದ್ರದ ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಯೋಜನೆಗೆ ರಾಜ್ಯದ ಆಡಳಿತಾತ್ಮಕ ಬೆಂಬಲ

ಬೆಂಗಳೂರು: ಕೇಂದ್ರ ಸರ್ಕಾರ ಪ್ರಾಯೋಜಿತ ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಬೆಂಬಲ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಈ ಕುರಿತು ಮಾಹಿತಿ ನೀಡಿದರು.

ಒಟ್ಟು 607 ಕಿಲೋಮೀಟರ್ ಉದ್ದದ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ಕೇಂದ್ರ ಸರ್ಕಾರದ ವತಿಯಿಂದ ಜಾರಿಯಾಗಲಿದ್ದು, ಕರ್ನಾಟಕದಲ್ಲಿ ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಹಾಗೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸಲಿದೆ.

ರಾಜ್ಯ ಭಾಗದಲ್ಲಿ 15 ನಿಲ್ದಾಣಗಳು ಇರಲಿವೆ ಎಂದು ತಿಳಿಸಲಾಗಿದೆ.

ಇದೇ ವೇಳೆ ಬೆಂಗಳೂರು-ಬೀದರ್-ಬೆಂಗಳೂರು ಹಾಗೂ ಬೆಂಗಳೂರು-ಕಲಬುರಗಿ-ಬೆಂಗಳೂರು ವಿಮಾನ ಸೇವೆಗಳಿಗೆ ಒಂದು ವರ್ಷದ ಅವಧಿಗೆ 28.47 ಕೋಟಿ ರೂ. ಹಣಕಾಸು ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ.

ಅದರ ಜೊತೆಗೆ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ 9 ಗ್ರಾಮಗಳಲ್ಲಿ 7,481 ಎಕರೆ 21 ಗುಂಟೆ ಪ್ರದೇಶದಲ್ಲಿ ಸಮಗ್ರ ಉಪನಗರ ಯೋಜನೆ ಜಾರಿಗೊಳಿಸಲು 18,133 ಕೋಟಿ ರೂ. ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Latest Posts

spot_imgspot_img

Fashion Week