HomeNEWSಇರಾನ್‌ನಲ್ಲಿ ಭೀಕರ ಅಗ್ನಿ ಅವಘಡ: 8 ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

ಇರಾನ್‌ನಲ್ಲಿ ಭೀಕರ ಅಗ್ನಿ ಅವಘಡ: 8 ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

-

spot_img

ಟೆಹ್ರಾನ್, ಮೇ 06: ಇರಾನ್‌ನ ರಾಜಧಾನಿ ಟೆಹ್ರಾನ್ ಸಮೀಪದ ಶಾಪಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತುರ್ತು ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.

ಅವಘಡವು ಟೆಹ್ರಾನ್ ಹತ್ತಿರದ ಆಂಡಿಶೆ ಪಟ್ಟಣದಲ್ಲಿರುವ ಅರ್ಘವನ್ ಶಾಪಿಂಗ್ ಸೆಂಟರ್‌ನಲ್ಲಿ ಮಂಗಳವಾರ ಸಂಭವಿಸಿದೆ. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ದಟ್ಟ ಕಪ್ಪು ಹೊಗೆ ವ್ಯಾಪಕವಾಗಿ ಹರಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ರಕ್ಷಣಾ ಕಾರ್ಯಾಚರಣೆ ವೇಳೆ ಹಲವರನ್ನು ಕಟ್ಟಡದಿಂದ ಹೊರತೆಗೆದು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಘಟನೆ ಯುದ್ಧ ಅಥವಾ ಇತ್ತೀಚಿನ ಭದ್ರತಾ ಪರಿಸ್ಥಿತಿಗೆ ಸಂಬಂಧಿಸಿದೆ ಎಂಬ ಯಾವುದೇ ಸೂಚನೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸುಮಾರು ಮೂರು ವಾರಗಳಿಂದ ಜಾರಿಯಲ್ಲಿರುವ ಕದನ ವಿರಾಮದ ನಡುವೆ ಈ ಅವಘಡ ಸಂಭವಿಸಿದೆ.

LEAVE A REPLY

Please enter your comment!
Please enter your name here

- Advertisment -spot_img