HomeNEWSಕೊಟ್ಟಿಯೂರು ವೈಶಾಖ ಮಹೋತ್ಸವ ಆರಂಭ: ಮಹಿಳೆಯರಿಗೆ ಜೂನ್‌ 20ರವರೆಗೆ ಮಾತ್ರ ಪ್ರವೇಶ

ಕೊಟ್ಟಿಯೂರು ವೈಶಾಖ ಮಹೋತ್ಸವ ಆರಂಭ: ಮಹಿಳೆಯರಿಗೆ ಜೂನ್‌ 20ರವರೆಗೆ ಮಾತ್ರ ಪ್ರವೇಶ

-

spot_img
ಕಣ್ಣೂರು: Kottiyoor Temple ಖ್ಯಾತ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಕೊಟ್ಟಿಯೂರು ಶಿವ ಕ್ಷೇತ್ರದಲ್ಲಿ ವೈಶಾಖ ಮಹೋತ್ಸವ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ದೇವರ ದರ್ಶನ ಈಗಾಗಲೇ ಆರಂಭವಾಗಿದೆ ಎಂಬ ಮಾಹಿತಿ ಹರಡಿದ ಹಿನ್ನೆಲೆ ದೇವಸ್ಥಾನ ಆಡಳಿತ ಸ್ಪಷ್ಟನೆ ನೀಡಿದ್ದು, ಈ ವರ್ಷದ ಅಧಿಕೃತ ದರ್ಶನ ಮೇ 30ರ ಮಧ್ಯರಾತ್ರಿಯಿಂದ ಆರಂಭವಾಗಲಿದೆ ಎಂದು ತಿಳಿಸಿದೆ.

ಮಹಿಳೆಯರಿಗೆ ಜೂನ್ 20ರವರೆಗೆ ಪ್ರವೇಶ

ಮೇ 30ರಿಂದ ಅಕ್ಕರೆ ಕೊಟ್ಟಿಯೂರು ದೇವಸ್ಥಾನಕ್ಕೆ ಭಕ್ತರಿಗೆ ಪ್ರವೇಶ ನೀಡಲಾಗುತ್ತದೆ. ಪ್ರತಿದಿನ ಬೆಳಗ್ಗೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರುತ್ತದೆ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಯರಿಗೆ ಜೂನ್ 20ರ ಮಧ್ಯಾಹ್ನದವರೆಗೆ ಮಾತ್ರ ಪ್ರವೇಶ ಅವಕಾಶವಿದ್ದು, ಜೂನ್ 24ರಂದು ಈ ವರ್ಷದ ಕೊನೆಯ ಪೂಜೆ ನಡೆಯಲಿದೆ.

ಸ್ವಚ್ಛತೆ ಕಾಪಾಡಲು ಮನವಿ

ಈ ಬಾರಿ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವ ಹಿನ್ನೆಲೆ, ದೇವಸ್ಥಾನ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಬಟ್ಟೆ ಹಾಗೂ ಒಳಉಡುಪುಗಳನ್ನು ಎಲ್ಲೆಂದರಲ್ಲಿ ಎಸೆಯದೆ ಪರಿಸರದ ಸ್ವಚ್ಛತೆಗೆ ಸಹಕರಿಸಬೇಕು ಎಂದು ಸೂಚಿಸಲಾಗಿದೆ. ಪ್ರಕೃತಿಯ ಮಧ್ಯೆ ನಡೆಯುವ ಕೊಟ್ಟಿಯೂರು ವೈಶಾಖ ಮಹೋತ್ಸವಕ್ಕೆ ಪ್ರತಿವರ್ಷ ಕರ್ನಾಟಕ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.

LEAVE A REPLY

Please enter your comment!
Please enter your name here

- Advertisment -
Google search engine