HomeINDIAದೇಶದಲ್ಲಿ LPG ಉತ್ಪಾದನೆ ಹೆಚ್ಚಳ: ಸವಾಲನ್ನು ಅವಕಾಶವಾಗಿ ಪರಿವರ್ತಿಸಿದ್ದೇವೆ ಎಂದ ಕೇಂದ್ರ ಸಚಿವ ಹರ್ದೀಪ್ ಸಿಂಗ್...

ದೇಶದಲ್ಲಿ LPG ಉತ್ಪಾದನೆ ಹೆಚ್ಚಳ: ಸವಾಲನ್ನು ಅವಕಾಶವಾಗಿ ಪರಿವರ್ತಿಸಿದ್ದೇವೆ ಎಂದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

-

Google search engine

ದೇಶದಲ್ಲಿ ಕಚ್ಚಾ ತೈಲ, LNG ಮತ್ತು LPG ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಯಾವುದೇ ಕೊರತೆಯ ಪರಿಸ್ಥಿತಿ ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ವಾರ್ಷಿಕ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ದೇಶೀಯ LPG ಉತ್ಪಾದನೆಯನ್ನು ದಿನಕ್ಕೆ 36 ಸಾವಿರ ಮೆಟ್ರಿಕ್ ಟನ್‌ನಿಂದ 54 ಸಾವಿರ ಮೆಟ್ರಿಕ್ ಟನ್‌ಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಮಧ್ಯ ಏಷ್ಯಾ ಬಿಕ್ಕಟ್ಟು ಆರಂಭವಾದ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಭಾರತ ಸವಾಲನ್ನು ಅವಕಾಶವಾಗಿ ಪರಿವರ್ತಿಸಿಕೊಂಡಿದ್ದು, ದೇಶದಲ್ಲಿ ಪೂರೈಕೆ ವ್ಯವಸ್ಥೆಯನ್ನು ಸುಗಮವಾಗಿ ನಿರ್ವಹಿಸಲಾಗಿದೆ ಎಂದು ತಿಳಿಸಿದರು.

ಹರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಭಾರತ ಇತರ ಹಲವು ರಾಷ್ಟ್ರಗಳಿಗಿಂತ ಭಿನ್ನವಾಗಿ ಇಂಧನ ಲಭ್ಯತೆ ಖಚಿತಪಡಿಸಿಕೊಂಡಿದೆ ಎಂದು ಅವರು ಹೇಳಿದರು.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಗಳು ಶೇಕಡಾ 50 ರಿಂದ 60 ರಷ್ಟು ಏರಿಕೆಯಾಗಿರುವುದಾಗಿ ತಿಳಿಸಿದ ಸಚಿವರು, ಇದರ ನಡುವೆಯೂ ಗ್ರಾಹಕರಿಗೆ ತೊಂದರೆಯಾಗದಂತೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.

ಕಳೆದ ನಾಲ್ಕು ವರ್ಷಗಳಲ್ಲಿ LPG ದರಗಳಲ್ಲಿ ದೊಡ್ಡ ಮಟ್ಟದ ಏರಿಕೆ ಆಗಿಲ್ಲ ಎಂದು ಹೇಳಿದ ಅವರು, ತೈಲ ಕಂಪನಿಗಳು ದಿನಕ್ಕೆ ಸುಮಾರು 1 ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿವೆ ಎಂದು ತಿಳಿಸಿದರು.

ಈ ನಡುವೆ LPG ಬೇಡಿಕೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಹಿಂದೆ ದಿನಕ್ಕೆ 90 ಸಾವಿರ ಮೆಟ್ರಿಕ್ ಟನ್ ಇದ್ದ ಬೇಡಿಕೆ ಈಗ 75 ಸಾವಿರ ಮೆಟ್ರಿಕ್ ಟನ್‌ಗೆ ಇಳಿದಿದೆ ಎಂದು ಹೇಳಿದರು.

ಪೆಟ್ರೋಲ್ ಮತ್ತು ಡೀಸೆಲ್ ಮಿತ ಬಳಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸಂದೇಶವನ್ನು ಜನರು ಪಾಲಿಸುವ ಅಗತ್ಯವಿದೆ ಎಂದು ಹರ್ದೀಪ್ ಸಿಂಗ್ ಪುರಿ ಕರೆ ನೀಡಿದರು.

LEAVE A REPLY

Please enter your comment!
Please enter your name here

- Advertisment -
Google search engine